Skip to content
ಫೆಬ್ರವರಿ 6, 2009 / odubazar

ಕಲಾಮ್ ಕೈನಲ್ಲಿ ಶಿವಪ್ರಸಾದ್

 

kalam-book-release3-1ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸ್ಟಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಇಂದು ಇಲ್ಲಿ ಹೇಳಿದರು. 

ಪತ್ರಕರ್ತ ಶಿವಪ್ರಸಾದ್ ಬರೆದಿರುವ ಚಂದ್ರಯಾನ ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಕಾನ್ಸ್ಟಾಂಟಿನ್ ಕಿವುಡನಾಗಿದ್ದ. ಆದರೆ ಅಧ್ಯಯನದಲ್ಲಿ ಅತೀವ ಆಸಕ್ತಿ ಹೊಂದಿದ್ದ. ತನ್ನ ಅಧ್ಯಯನದಿಂದ ವಿವಿಧ ಸಮೀಕರಣಗಳನ್ನು ರಚಿಸಿದ್ದ. ಆ ಮೂಲಕ ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು ತಿಳಿಸಿದ್ದ. ಇಂದು ಆತನ ಊಹೆ ನಿಜವಾಗಿದೆ. ನಾವು ಚಂದ್ರನ ಮೇಲೆ ಹೊಗಿ ಬಂದಿದ್ದೇವೆ. ಹೀಗಾಗಿ ಚಂದ್ರಯಾನದ ಕಲ್ಪನೆಯ ಜನಕ ಕನ್ಸ್ಟಾಂಟಿನ್ ಎಂದರು.

ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಥಮ ಪ್ರತಿಯನ್ನು ದಿ ವೀಕ್ ನ ಸ್ಥಾನಿಕ ಸಂಪಾದಕರಾದ ಕೆ.ಎಸ್. ಸಚ್ಚಿದಾನಂದ ಮೂರ್ತಿ ಅವರಿಗೆ ನೀಡಿದರು. ನಂತರ ಪುಸ್ತಕದಲ್ಲಿನ ವಿವಿಧ ಅಧ್ಯಾಯಗಳ ಬಗ್ಗೆ ಮಾಹಿತಿ ಪಡೆದರು. 

ಚಂದ್ರಯಾನ ಉಡ್ಡಯನದ ನಂತರ ಅಮೇರಿಕಾದ ನಾಸಾ, ಒಬಾಮಾ ನೀಡಿದ್ದ ಪ್ರತಿಕ್ರಿಯೆ ಹಾಗೂ ಆ ಬಗ್ಗೆ ಮಾಧವನ್ ನಾಯರ್ ನೀಡಿದ್ದ ವಿವರಣೆ ಇರುವ ಅಧ್ಯಾಯವನ್ನು ಲೇಖಕ ಶಿವಪ್ರಸಾದ್ ಅವರಿಂದ ಓದಿಸಿ, ವಿವರಣೆ ಪಡೆದರು. 

ವಿನಾಯಕ್ ಭಟ್ ಬರೆದಿದ್ದ ದಿ ಗ್ರೇಟ್ ಮೂನ್ ಹೋಕ್ಸ್-1835 ಅಧ್ಯಾಯದ ಬಗ್ಗೆಯೂ ವಿವರಣೆ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿನಾಯಕ್ ಭಟ್ ಅವರಿಗೆ ಅವರ ಲೇಖನದಲ್ಲಿದ್ದ ಫೋಟೋ ತೋರಿಸಿ, ಈ ಬಗ್ಗೆ ವಿವರಣೆ ಕೇಳಿ ಆನಂದಿಸಿದರು.

‘ಚಂದ್ರಯಾನ ಪುಸ್ತಕ ಬರೆಯಲು ಒಂದು ವರ್ಷ ತೆಗೆದುಕೊಂಡಿದ್ದೀರಿ. ಐತಿಹಾಸಿಕ ಯೋಜನೆಯಾದ ಚಂದ್ರಯಾನ ಕುರಿತ ಸಮಗ್ರ ವಿವರ ಇರುವ ಪುಸ್ತಕವನ್ನು ಹೊರ ತಂದಿರುವುದು ಉತ್ತಮ ಪ್ರಯತ್ನ’ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ‘ಪ್ರಜಾವಾಣಿ’ ವಿಶೇಷ ಪ್ರತಿನಿಧಿ ದಿನೇಶ್ ಅಮಿನ್ ಮಟ್ಟು, ‘ಡೆಕ್ಕನ್ ಹೆರಾಲ್ಡ್’ ಸ್ಥಾನಿಕ ಸಂಪಾದಕ ಬಿ.ಎಸ್. ಅರುಣ್, ‘ವಿಜಯ ಕರ್ನಾಟಕ’ ದೆಹಲಿ ಪ್ರತಿನಿಧಿ ವಿನಾಯಕ್ ಭಟ್, ಕರ್ನಾಟಕ ವಾರ್ತಾ ಕೇಂದ್ರದ ಸಹಾಯಕ ನಿರ್ದೆಶಕ ವೀರಣ್ಣ ಕಮ್ಮಾರ, ಸುವರ್ಣ ಚಾನೆಲ್ ವರದಿಗಾರ ಪ್ರಶಾಂತ್ ನಾತೂ ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: